ಬೆಂಗಳೂರು : ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 13,800 ಕೊರೊನಾ ಪಾಸಿಟಿವ್ ಕೇಸ್ ದೃಢಪಟ್ಟಿದ್ದು, 365 ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆ ಹೆಲ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಇಂದು 13,800 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 26,83,314ಕ್ಕೆ ಏರಿಕೆಯಾಗಿದೆ. ಇಂದು 365 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 31,260 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಇಂದು 25,346 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 23,83,758 ಮಂದಿ ಗುಣಮುಖರಾಗಿ ಡಿಶ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 2,68,275 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು 2,686 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 206 ಸೋಂಕಿತರು ಸಾವನ್ನಪ್ಪಿದ್ದಾರೆ. 1,24,807 ಸಕ್ರಿಯ ಪ್ರಕರಣಗಳಿವೆ.