ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1464 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 29 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕು ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 352 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು, 5 ಮಂದಿ ಮೃತಪಟ್ಟಿದ್ದರೆ.
ರಾಜ್ಯದಲ್ಲಿ ಒಂದೇ ದಿನ 2706 ಮಂದಿ ಸೋಂಕಿನಿಂದ ಗುಣಮುಖಿತರಾದರೆ, ಬೆಂಗಳೂರಿನಲ್ಲಿ 1110 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 26,256ಕ್ಕೆ ಇಳಿಕೆಯಾಗಿದೆ.