ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ನ ಅಟ್ಟಹಾಸ ಮುಂದುವರಿದಿದ್ದು, ಕಳೆದ 24 ಗಂಟೆಯಲ್ಲಿ 14,859 ಜನರಿಗೆ ಹೊಸದಾಗಿ ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ 14,859 ಕೊರೊನಾ ಕೇಸ್ ಗಳು ಪತ್ತೆಯಾಗಿವೆ. ಅಲ್ಲದೇ ಇದೇ ಅವಧಿಯಲ್ಲಿ 78 ಸೋಂಕಿತರು ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಸೋಂಕಿತರ ಸಂಖ್ಯೆ 11,24,509ಕ್ಕೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 13,190ಕ್ಕೆ ಏರಿಕೆಯಾಗಿದೆ.
ಇನ್ನು ಇಂದು 4031 ಸೋಂಕಿತರು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದುವರೆಗೆ 10,03,985 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿನ್ನೂ 1,07,315 ಸಕ್ರೀಯ ಪ್ರರಕಣಗಳಿವೆ.
ಇನ್ನು ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 9,917 ಕೊರೊನಾ ಕೇಸ್ ಗಳು ಪತ್ತೆಯಾಗಿವೆ.