ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ 15 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲು ರಾಜ್ಯ ಸರಕಾರ ತೀರ್ಮಾನಿಸಿದೆ.
ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಸಚಿವರು ಹಾಗೂ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿದ್ದು, ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳಬೇಕಿದೆ.
ಮೇ 10ರಿಂದ 25ರವರೆಗೆ ರಾಜ್ಯದಲ್ಲಿ ಸಂಪೂರ್ಣ ಹಾಗೂ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿ ಮಾಡಲು ರಾಜ್ಯ ಸರಕಾರ ತೀರ್ಮಾನಿಸಿದೆ. ಈ ಮೂಲಕ ಜನತಾ ಲಾಕ್ ಡೌನ್ ಅವಧಿ ಮುಗಿಯುವ 2 ದಿನಗಳ ಮುನ್ನವೇ ಸಂಪೂರ್ಣ ಲಾಕ್ ಡೌನ್ ಜಾರಿಗೆ ಬರುವ ಸಾಧ್ಯತೆ ಇದೆ.