ರಾಜ್ಯದಲ್ಲಿ 1501 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 2039 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 28,97,664ಕ್ಕೆ ಏರಿಕೆಯಾಗಿದೆ.
ಒಂದೇ ದಿನದಲ್ಲಿ 32 ಮಂದಿ ಅಸುನೀಗಿದ್ದು ಒಟ್ಟಾರೆ ಸಾವಿನ ಸಂಖ್ಯೆ 36,437ಕ್ಕೆ ಜಿಗಿತ ಕಂಡಿದೆ. ರಾಜ್ಯದಲ್ಲಿ ಒಟ್ಟಾರೆ ಗುಣಮುಖಿತರ ಸಂಖ್ಯೆ 28,38,717ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 22,487ಕ್ಕೆ ಇಳಿಕೆಯಾಗಿದೆ.
ರಾಜಧಾನಿ ಬೆಂಗಳೂರು ನಗರದಲ್ಲಿ 354 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 5 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 484 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8047ಕ್ಕೆ ಕುಸಿದಿದೆ.