ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1531 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 19 ಮಂದಿ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಸಚಿವಾಲಯ ಬುಧವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಂದೇ ದಿನ 2879 ಡಿಸ್ಚಾರ್ಜ್ ಆಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 22,569ಕ್ಕೆ ಏರಿಕೆಯಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ 376 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 5 ಮಂದಿ ಅಸುನೀಗಿದ್ದಾರೆ.