ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ರಾಜ್ಯಾಧ್ಯಂತ 15,785 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 11,76,850ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಬೆಂಗಳೂರು ನಗರದಲ್ಲಿ 9,618 ಜನರು ಸೇರಿದಂತೆ ರಾಜ್ಯಾಧ್ಯಂತ 15,785 ಜನರಿಗೆ ಕೊರೊನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 11,76,850ಕ್ಕೆ ಏರಿಕೆಯಾಗಿದೆ.
ಇವರಲ್ಲಿ ಇಂದು 7098 ಜನರು ಸೇರಿದಂತೆ ಇದುವರೆಗೆ 10,21,250 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ 1,42,084 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ.
ಇನ್ನೂ ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 97 ಜನರು ಸೇರಿದಂತೆ ರಾಜ್ಯಾಧ್ಯಂತ ಸೋಂಕಿತರಾದಂತ 146 ಜನರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇದರಿಂದಾಗಿ ಕಿಲ್ಲರ್ ಕೊರೊನಾಗೆ ಬಲಿಯಾದವರ ಸಂಖ್ಯೆ 13,497ಕ್ಕೆ ಏರಿಕೆಯಾಗಿದೆ ಎಂಬುದಾಗಿ ತಿಳಿಸಿದೆ.