ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1606 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 31 ಮಂದಿ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 467 ಸೋಂಕಿತರು ಹೊಸದಾಗಿ ಕಂಡು ಬಂದಿದ್ದು, ಮೂವರು ಬಲಿಯಾಗಿದ್ದಾರೆ. ಒಂದೇ ದಿನದಲ್ಲಿ 1937 ಗುಣಮುಖಿತರಾಗಿದ್ದು, 23,057 ಸಕ್ರಿಯ ಪ್ರಕರಣಗಳಿವೆ.