ರಾಜ್ಯದಲ್ಲಿ ಇಂದು 16,387 ಕೊರೊನಾ ಕೇಸ್​​ ಪತ್ತೆ, 463 ಸೋಂಕಿತರ ಸಾವು

ಬೆಂಗಳೂರು : ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 16,387 ಕೊರೊನಾ ಪಾಸಿಟಿವ್ ಕೇಸ್ ದೃಢಪಟ್ಟಿದ್ದು, 463 ಸೋಂಕಿತರು ಸಾವನ್ನಪ್ಪಿದ್ದಾರೆ.

ರಾಜ್ಯ ಆರೋಗ್ಯ ಇಲಾಖೆ ಹೆಲ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಇಂದು 16,387 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 26,35,122ಕ್ಕೆ ಏರಿಕೆಯಾಗಿದೆ. ಇಂದು 463 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 30,017 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 21,199 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 23,12,060 ಮಂದಿ ಗುಣಮುಖರಾಗಿ ಡಿಶ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 2,93,024 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ ಇಂದು 4,095 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 307 ಸೋಂಕಿತರು ಸಾವನ್ನಪ್ಪಿದ್ದಾರೆ. 1,38,870 ಸಕ್ರಿಯ ಪ್ರಕರಣಗಳಿವೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!