ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1826 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 33 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಧವಾರ ಬಿಡುಗಡೆ ಮಾಡಿದ ಬುಲೆಟಿನ್ ಪ್ರಕಾರ ಬೆಂಗಳೂರಿನಲ್ಲಿ ಒಂದೇ ದಿನ 377 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು, 5 ಮಂದಿ ಮೃತಪಟ್ಟಿದ್ದಾರೆ.
ಒಂದೇ ದಿನದಲ್ಲಿ 1618 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದು, ಬೆಂಗಳೂರಿನಲ್ಲಿ 280 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 22, 851ಕ್ಕೆ ಏರಿಕೆಯಾದರೆ, ಬೆಂಗಳೂರಿನಲ್ಲಿ 8290 ಸಕ್ರಿಯ ಪ್ರಕರಣಗಳಿವೆ.