ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆ ಕಂಡುಬಂದಿದ್ದು, ಕಳೆದ 24 ಗಂಟೆಯಲ್ಲಿ 18,324 ಕೊರೊನಾ ಪಾಸಿಟಿವ್ ಕೇಸ್ ದೃಢಪಟ್ಟಿದ್ದು, 514 ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆ ಹೆಲ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಇಂದು 18,324 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 2,65,3446ಕ್ಕೆ ಏರಿಕೆಯಾಗಿದೆ. ಇಂದು 514 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 30,531 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ
ರಾಜ್ಯದಲ್ಲಿ ಇಂದು 24,036 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 23,36,096 ಮಂದಿ ಗುಣಮುಖರಾಗಿ ಡಿಶ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 2,86,738 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು 3,533 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 347 ಸೋಂಕಿತರು ಸಾವನ್ನಪ್ಪಿದ್ದಾರೆ. 1,34,384 ಸಕ್ರಿಯ ಪ್ರಕರಣಗಳಿವೆ.