ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1875 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 25 ಮಂದಿ ಮೃತಪಟ್ಟಿದ್ದಾರೆ. ಆದರೆ 21 ಜಿಲ್ಲೆಗಳಲ್ಲಿ ಶೂನ್ಯ ದಾಖಲಾಗಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾನುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 29,06,999ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 36,587ಕ್ಕೆ ಜಿಗಿತ ಕಂಡಿದೆ.
ಒಂದು ದಿನದಲ್ಲಿ 1502 ಸೋಂಕಿತರು ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 28,46,244ಕ್ಕೆ ಏರಿಕೆಯಾದರೆ, ಸಕ್ರಿಯ ಪ್ರಕರಣಗಳ ಸಂಖ್ಯೆ 24,144ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ 409 ಮಂದಿಗೆ ಸೋಂಕು ತಗುಲಿದ್ದು, 8 ಮಂದಿ ಅಸುನೀಗಿದ್ದಾರೆ, 377 ಸೋಂಕಿತರು ಗುಣಮುಖಿತರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8553ಕ್ಕೆ ಇಳಿಕೆಯಾಗಿದೆ.