ಅತಿಥೇಯ ಶ್ರೀಲಂಕಾ ತಂಡ ಭಾನುವಾರ ನಡೆದ ಮೊದಲ ಟಿ-20 ಪಂದ್ಯದಲ್ಲಿ ಟಾಸ್ ಸೋತು ಪ್ರವಾಸಿ ಭಾರತ ತಂಡಕ್ಕೆ ಮೊದಲು ಬ್ಯಾಟ್ ಮಾಡುವಂತೆ ಆಮಂತ್ರಿಸಿದೆ.
ಕೊಲೊಂಬೊದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಸ್ಪಿನ್ನರ್ ವರುಣ್ ಚಕ್ರವರ್ತಿ ಕಣಕ್ಕಿಳಿಯುವ ಮೂಲಕ ಭಾರತ ತಂಡಕ್ಕೆ ಮರಳಿದ್ದಾರೆ. ಉಳಿದಂತೆ ಏಕದಿನ ತಂಡದಲ್ಲಿದ್ದ ಆಟಗಾರರನ್ನೇ ಉಳಿಸಿಕೊಳ್ಳಲಾಗಿದೆ.
ಮೊದಲು ಬ್ಯಾಟ್ ಮಾಡಲು ಕಣಕ್ಕಿಳಿದ ಭಾರತ ತಂಡ ಆರಂಭದಲ್ಲೇ ಪೃಥ್ವಿ ಶಾ ವಿಕೆಟ್ ಕಳೆದುಕೊಂಡು ಆಘಾತಕ್ಕೆ ಒಳಗಾಗಿದೆ.