ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2.73 ಲಕ್ಷ ಪ್ರಕರಣಗಳು ಪತ್ತೆಯಾಗಿದ್ದು, ಮತ್ತೊಮ್ಮೆ ಸಾರ್ವಕಾಲಿಕ ದಾಖಲೆಯ ಪ್ರಕರಣಗಳು ವರದಿಯಾಗಿದ್ದು, 1.50 ಕೋಟಿ ದಾಟಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಂದು ದಿನದಲ್ಲಿ 1,619 ಸಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸಾವಿನ ಸಂಖ್ಯೆ 1,78,769ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ದಾಖಲೆಯ 1,44,178 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 1,29,53,821ಕ್ಕೆ ತಲುಪಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 19,29,329ಕ್ಕೆ ಏರಿಕೆಯಾಗಿದೆ.