ಗಣೇಶೋತ್ಸವಕ್ಕೆ ಊರಿಗೆ ತೆರಳುತ್ತಿರೋ ರೈಲ್ವೆ ಪ್ರಯಾಣಿಕರಿಗಾಗಿ ಭಾರತೀಯ ರೈಲ್ವೆ ಇಲಾಖೆ, 200 ಹೊಸ ವಿಶೇಷ ರೈಲುಗಳ ಸಂಚಾರವನ್ನು ಆರಂಭಿಸುತ್ತಿದೆ. ಈ ಮೂಲಕ ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ.
ಈ ಕುರಿತಂತೆ ಭಾರತೀಯ ರೈಲ್ವೆ ಇಲಾಖೆಯು ಮಾಹಿತಿ ನೀಡಿದ್ದು, ಭಾರತೀಯ ರೈಲ್ವೆಯ ಕೇಂದ್ರ ರೈಲ್ವೆ (ಸಿಆರ್) ಮತ್ತು ಪಶ್ಚಿಮ ರೈಲ್ವೆ (ಡಬ್ಲ್ಯುಆರ್) ಹಬ್ಬದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ತೆರವುಗೊಳಿಸುವ ಪ್ರಯತ್ನದಲ್ಲಿ ೨೦೦ಕ್ಕೂ ಹೆಚ್ಚು ವಿಶೇಷ ರೈಲು ಸೇವೆಗಳನ್ನು ಓಡಿಸಲು ನಿರ್ಧರಿಸಿದೆ.