ಬೆಂಗಳೂರು: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಕೇಸ್ಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 20,628 ಕೊರೊನಾ ಪಾಸಿಟಿವ್ ಕೇಸ್ ದೃಢಪಟ್ಟಿದ್ದು, 492 ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆ ಹೆಲ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಇಂದು 22,823 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 2,56,7449ಕ್ಕೆ ಏರಿಕೆಯಾಗಿದೆ. ಇಂದು 492 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 28,298 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಇಂದು 42,444 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 21,89,064 ಮಂದಿ ಗುಣಮುಖರಾಗಿ ಡಿಶ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 3,50,066 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು 4,889 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 278 ಸೋಂಕಿತರು ಸಾವನ್ನಪ್ಪಿದ್ದಾರೆ. 1,64,182 ಸಕ್ರಿಯ ಪ್ರಕರಣಗಳಿವೆ.