ನವದೆಹಲಿ : ಕಳೆದ 24 ಗಂಟೆಯಲ್ಲಿ ದೇಶದಲ್ಲಿ 2,08,921 ಹೊಸದಾಗಿ ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, 4157 ಸೋಂಕಿತರು ಸಾವನ್ನಪ್ಪಿದ್ದಾರೆ.
ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 2,71,57,795 ಕ್ಕೆ ಏರಿಕೆಯಾಗಿದ್ದು, ದೇಶದಲ್ಲಿ 24,95,591 ಸಕ್ರಿಯ ಪ್ರಕರಣಗಳಿವೆ. 2,43,50,816, ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ.
ಕಳೆದ 24 ಗಂಟೆಯಲ್ಲಿ 2,95,955 ಮಂದಿ ಗುಣಮುಖರಾಗಿ ಡಿಶ್ಚಾರ್ಜ್ ಆಗಿದ್ದಾರೆ. ಈವರೆಗೆ ಸಾವನ್ನಪ್ಪಿದವರ ಸಂಖ್ಯೆ 3,11,388 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಇಲಾಖೆ ಮಾಹಿತಿ ನೀಡಿದೆ.