ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 21,794 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಸೋಂಕಿತರ ಸಂಖ್ಯೆ 11,98,644 ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 21,794 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 11,98,644ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿಗೆ ಇಂದು 149 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 13,646ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 13,782 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 5,70,035ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 92 ಮಂದಿ ಬಲಿಯಾಗಿದ್ದಾರೆ.