ರಷ್ಯಾ, ಉಕ್ರೇನ್ ಯುದ್ಧ ಪ್ರಾರಂಭವಾದಾಗಿನಿಂದ ಈವರೆಗೂ 22,500 ವಿದ್ಯಾರ್ಥಿಗಳನ್ನು ಉಕ್ರೇನ್ ನಿಂದ ಕರೆ ತರಲಾಗಿದ್ದು, ಆಪರೇಷನ್ ಗಂಗಾ ಮಿಷನ್ ಪೂರ್ಣವಾಗಿದೆ ಎಂದು ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ರಷ್ಯಾ, ಉಕ್ರೇನ್ ಹಿನ್ನೆಯಲ್ಲಿ ಉಕ್ರೇನ್ ನಲ್ಲಿ ಸಿಲುಕೊಂಡಿದ್ದ ಭಾರತೀಯರನ್ನು ವಾಪಸ್ ಕರೆಸಲು ಕೇಂದ್ರ ಸರ್ಕಾರ ಆಪರೇಷನ್ ಗಂಗಾ ಪ್ರಾರಂಭಿಸಿತ್ತು. ರಷ್ಯಾ ಉಕ್ರೇನ್ ನ ಮೇಲೆ ನಡೆಸುತ್ತಿರುವ ದಾಳಿಯಿಂದಾಗಿ ಅಲ್ಲಿನ ವಿಶ್ವವಿದ್ಯಾಲಯಗಳು ನಾಶವಾಗಿದೆ. ಇದರಿಂದಾಗಿ ಉಕ್ರೇನ್ ನಿಂದ ವಾಪಸ್ ಆದ ವೈದ್ಯಕೀಯ ವಿದ್ಯಾರ್ಥಿಗಳ ಶಿಕ್ಷಣ ಸಂಬಂಧ ಅರ್ಜಿಗಳನ್ನು ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದರು. ಈ ಅರ್ಜಿಗೆ ಕೇಂದ್ರ ಸರ್ಕಾರ ಉತ್ತರ ನೀಡಿದೆ.
0 77 Less than a minute