ಬೆಂಗಳೂರು: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಕೇಸ್ಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 22,758 ಕೊರೊನಾ ಪಾಸಿಟಿವ್ ಕೇಸ್ ದೃಢಪಟ್ಟಿದ್ದು, 588 ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆ ಹೆಲ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಇಂದು 22,758 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 24,72,973ಕ್ಕೆ ಏರಿಕೆಯಾಗಿದೆ. ಇಂದು 588 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 26,399 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಇಂದು 38,224 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 20,22,172 ಮಂದಿ ಗುಣಮುಖರಾಗಿ ಡಿಶ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 4,24,381 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು 6243 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 350 ಸೋಂಕಿತರು ಸಾವನ್ನಪ್ಪಿದ್ದಾರೆ. 2,19,551 ಸಕ್ರಿಯ ಪ್ರಕರಣಗಳಿವೆ.