ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 233 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 6 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶುಕ್ರವಾರ ನೀಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3479ಕ್ಕೆ ಕುಸಿದಿದೆ.
ಬೆಂಗಳೂರಿನಲ್ಲಿ 163 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಇಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ.