ಬೆಂಗಳೂರು: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಕೇಸ್ಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 24,214 ಕೊರೊನಾ ಪಾಸಿಟಿವ್ ಕೇಸ್ ದೃಢಪಟ್ಟಿದ್ದು, 476 ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆ ಹೆಲ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಇಂದು 24,214 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 2,52,3998ಕ್ಕೆ ಏರಿಕೆಯಾಗಿದೆ. ಇಂದು 476 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 27,405 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಇಂದು 31,459 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 20,94,369 ಮಂದಿ ಗುಣಮುಖರಾಗಿ ಡಿಶ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 4,02,203 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು 6643 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 273 ಸೋಂಕಿತರು ಸಾವನ್ನಪ್ಪಿದ್ದಾರೆ. 2,06,390 ಸಕ್ರಿಯ ಪ್ರಕರಣಗಳಿವೆ