ಆಕ್ಸಿಜನ್ ಕೊರತೆ ಹಿನ್ನೆಲೆಯಲ್ಲಿ ದೆಹಲಿ ಆಸ್ಪತ್ರೆಯಲ್ಲಿ ಒಂದೇ ದಿನ 25 ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ.
ಜೈಪುರ್ ಗೋಲ್ಡನ್ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ಆಕ್ಸಿಜನ್ ಪೂರೈಕೆ ಒತ್ತಡ ಕಡಿಮೆ ಇದ್ದಿದ್ದರಿಂದ 25 ರೋಗಿಗಳು ಅಸುನೀಗಿದ್ದಾರೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ನಾವು 3.5 ಲಕ್ಷ ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಸುವಂತೆ ಕೇಂದ್ರ ಸರಕಾರದ ಬಳಿ ಮನವಿ ಮಾಡಿದ್ದೇವೆ. ಅದು ಸಂಜೆ 5 ಗಂಟೆ ಬರಬೇಕಿತ್ತು. ಆದರೆ ಮಧ್ಯರಾತ್ರಿ ವೇಳೆಗೆ ತಲುಪಿದೆ. ಇದರಿಂದ ರೋಗಿಗಳು ಮೃತಪಡುವಂತಾಯಿತು ಎಂದು ಅಧಿಕಾರಿ ಹೇಳಿದ್ದಾರೆ.