ಬೆಂಗಳೂರು : ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 25,311 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಇದೇ ಸಮಯದಲ್ಲಿ 529 ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆ ಹೆಲ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಇಂದು 25,311 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 24,50,215 ಕ್ಕೆ ಏರಿಕೆಯಾಗಿದೆ. ಇಂದು 529 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 25,811 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಇಂದು 57,333 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 19,83,948 ಮಂದಿ ಗುಣಮುಖರಾಗಿ ಡಿಶ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 4,40,435 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು 5701 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 297 ಸೋಂಕಿತರು ಸಾವನ್ನಪ್ಪಿದ್ದಾರೆ. 2,36,868 ಸಕ್ರಿಯ ಪ್ರಕರಣಗಳಿವೆ.