ದೇಶದಲ್ಲಿ 2.59 ಲಕ್ಷ ಕೊರೊನಾ ಕೇಸ್​ ಪತ್ತೆ, 4,209 ಸಾವು

ನವದೆಹಲಿ : ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2,59,591 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 4,209 ಸೋಂಕಿತರು ಸಾವನ್ನಪ್ಪಿದ್ದಾರೆ.

ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ನೀಡಿದ್ದು, ಒಂದೇ ದಿನದಲ್ಲಿ ದೇಶದಲ್ಲಿ 2,59,591 ಕೊರೊನಾ ಪ್ರಕರಣಗಳು ಕಂಡು ಬಂದಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 2,60,31,991ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ ಕಳೆದ 24 ಗಂಟೆಯಲ್ಲಿ 4,209 ಮಂದಿ ಕೊರೊನಾ ಸೋಂಕಿಗೆ ಮೃತಪಟ್ಟಿದ್ದು, ಈ ಮೂಲಕ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,91,331 ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಈವರೆಗೆ ಕೊರೊನಾ ಸೋಂಕಿನಿಂದ 2,27,12,735 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 30,27,925 ಸಕ್ರಿಯ ಪ್ರಕರಣಗಳಿವೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!