ಬೆಂಗಳೂರು : ದಿನದಿಂದ ದಿನಕ್ಕೆ ಕೊರೊನಾ ಕೇಸ್ಗಳು ಇಳಿಕೆಯಾಗುತ್ತಿದ್ದು, ರಾಜ್ಯದಲ್ಲಿ ಇಂದು 25,979 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. 626 ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ರಾಜ್ಯದಲ್ಲಿ ಇಂದು 25,979 ಕೊರೊನಾ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 24,24,904 ಕ್ಕೆ ಏರಿಕೆಯಾಗಿದೆ. ಇಂದು 35,573 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರ ಸಂಖ್ಯೆ 19,26,615 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ 4,72,986 ಸಕ್ರಿಯ ಕೊರೊನಾ ಪ್ರಕರಣಗಳಿದ್ದು, ಇಂದು 626 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಸಾವನ್ನಪ್ಪಿದವರ ಸಂಖ್ಯೆ 25,282 ಕ್ಕೆ ಏರಿಕೆಯಾಗಿದೆ.