ಕೊರೊನಾ ಸೋಂಕಿನಿಂದ ಚೇತರಿಸಿಕೊಂಡರೂ ಬ್ಲ್ಯಾಕ್ ಫಂಗಸ್ ಹೆಮ್ಮಾರಿಯಾಗಿ ಜನರನ್ನು ಕಾಡುತ್ತಿದ್ದು, ರಾಜ್ಯದಲ್ಲಿ 2856 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, 225 ಮಂದಿ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ರಾಜ್ಯದಲ್ಲಿ ಇದುವರೆಗೆ 191 ಮಂದಿ ಬ್ಲ್ಯಾಕ್ ಫಂಗಸ್ ನಿಂದ ಗುಣಮುಖಿತರಾಗಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಕೂಡ ಬ್ಲ್ಯಾಕ್ ಫಂಗಸ್ ಸೋಂಕಿತರ ಸಂಖ್ಯೆ ಸಾವಿರ ಗಡಿ ದಾಟಿದ್ದು, 959 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. 825 ಮಂದಿ ವಿವಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 49 ಮಂದಿ ಗುಣಮುಖಿತರಾಗಿದ್ದು, 72 ಮಂದಿ ಮೃತಪಟ್ಟಿದ್ದಾರೆ.