ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 2886 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, 8 ಮಂದಿ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ 9,83,930ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 12,492ಕ್ಕೆ ಜಿಗಿತ ಕಂಡಿದೆ.
ರಾಜ್ಯದಲ್ಲಿ ಒಂದು ದಿನದಲ್ಲಿ 1179 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಆದ ಒಟ್ಟಾರೆ ಸಂಖ್ಯೆ 9,50,167ಕ್ಕೆ ಜಿಗಿತ ಕಂಡಿದೆ. ಇದರಿಂದ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 21,252ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 1820 ಸೋಂಕು ಪ್ರಕರಣಗಳು ವರದಿಯಾಗಿದ್ದು, ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. 474 ಮಂದಿ ಗುಣಮುಖಿತರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 14,671ಕ್ಕೆ ಜಿಗಿದಿದೆ.