ಅಪ್ರಾಪ್ತರು ಸೇರಿದಂತೆ 29 ಮಂದಿ 15 ವರ್ಷದ ಬಾಲಕಿ ಮೇಲೆ ನಿರಂತರವಾಗಿ ಹಲವು ತಿಂಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.
ಪ್ರತಿ ಬಾರಿ ಬಾಲಕಿಯ ಮೇಲೆ ಹಲ್ಲೆ ಮಾಡಿ ಅತ್ಯಾಚಾರ ಎಸಗುವುದು ವೀಡಿಯೋ ಮಾಡಿ ಅದನ್ನು ತೋರಿಸಿ ಬ್ಲಾಕ್ ಮೇಲೆ ಮಾಡುತ್ತಿದ್ದರು. ಕೊನೆಗೆ ಇದರಿಂದ ಬೇಸತ್ತ ಬಾಲಕಿ ದೊಂಬಿವಲಿಯ ಮನ್ ಪಡ ಪೊಲೀಸ್ ಠಾಣೆಗೆ ದೂರು ನೀಡಿ ರಕ್ಷಣೆಗೆ ಮೊರೆ ಹೋಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ.
ಕಳೆದ ಜನವರಿಯಿಂದ ಸೆಪ್ಟೆಂಬರ್ ವರೆಗೂ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ನಡೆದಿದ್ದು, ಬಾಲಕಿ 29 ಮಂದಿಯ ಹೆಸರು ಹೇಳಿದ್ದಾಳೆ. ಬಾಲಕಿ ದೂರು ನೀಡುತ್ತಿದ್ದಂತೆ ಇಬ್ಬರು ಅಪ್ರಾಪ್ತರು ಸೇರಿದಂತೆ 23 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.