ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 29,438 ಮಂದಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, 208 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 17,342 ಸೋಂಕು ಪತ್ತೆಯಾಗಿದ್ದು, 149 ಮಂದಿ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಒಂದೇ ದಿನ 9058 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ 13,04,397 ಸೋಂಕಿತರ ಪೈಕಿ 10,55,612 ಮಂದಿ ಗುಣಮುಖಿತರಾಗಿದ್ದಾರೆ. ಒಟ್ಟಾರೆ ಸಾವಿನ ಸಂಖ್ಯೆ 14,283ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2,34,483ಕ್ಕೆ ಜಿಗಿತ ಕಂಡಿದೆ.