ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 2975 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, 21 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 9,92,779ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 12,541ಕ್ಕೆ ಜಿಗಿತ ಕಂಡಿದೆ.
ರಾಜ್ಯದಲ್ಲಿ 1262 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 9,54,678ಕ್ಕೆ ತಲುಪಿದೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 25,541ಕ್ಕೆ ಏರಿದೆ.
ಬೆಂಗಳೂರಿನಲ್ಲಿ ಒಂದು ದಿನದಲ್ಲಿ 1984 ಸೋಂಕು ಪ್ರಕರಣಗಳು ಕಂಡು ಬಂದಿದ್ದು, 11 ಮಂದಿ ಮೃತಪಟ್ಟಿದ್ದಾರೆ. 650 ಮಂದಿ ಡಿಸ್ಚಾರ್ಜ್ ಆಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 4,09715ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 17582ಕ್ಕೆ ಜಿಗಿತ ಕಂಡಿದೆ.