ದೇಶದಲ್ಲಿ ಕಳೆದ ಒಂದು ದಿನದಲ್ಲಿ 3.8 ಲಕ್ಷ ಜನರಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದ್ದು, 3645 ಮಂದಿ ಅಸುನೀಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 1,83,76,524ಕ್ಕೆ ಏರಿಕೆಯಾಗಿದೆ.
ಏಪ್ರಿಲ್ 22ರಂದು ಮೊದಲ ಬಾರಿ ದೇಶದಲ್ಲಿ 3 ಲಕ್ಷಕ್ಕಿಂತ ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗಿದ್ದು, ಪ್ರಸ್ತುತ ದೇಶದಲ್ಲಿ ಪ್ರತಿದಿನ 3.5 ಲಕ್ಷಕ್ಕೂ ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗುತ್ತಿವೆ.
ಬುಧವಾರ ಒಂದು ದಿನದಲ್ಲಿ 3,79,257 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, 2,59,507 ಮಂದಿ ಡಿಸ್ಚಾರ್ಜ್ ಆಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 1,50,86,878ಕ್ಕೆ ಜಿಗಿತ ಕಂಡಿದೆ.