ಉಡುಪಿ : ಉಡುಪಿ ಮೂಲದ ಅನಿವಾಸಿ ಭಾರತೀಯ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ನೀಡಲಾಗಿದೆ. ಉಡುಪಿ ಜಿಲ್ಲಾ ನ್ಯಾಯಾಲಯ ತೀರ್ಪು ಪ್ರಕಟ ಪ್ರಕಟಿಸಿದೆ.
ಭಾಸ್ಕರ್ ಶೆಟ್ಟಿಯವರನ್ನು ಕೊಲೆಗೈದು ಹೋಮಕುಂಡದಲ್ಲಿ ಸುಟ್ಟಿರುವ ಆರೋಪ ಸಾಬೀತಾಗಿರುವುದರಿಂದ ಅವರ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ ಹಾಗೂ ರಾಜೇಶ್ವರಿಯ ಗೆಳೆಯ ನಿರಂಜನ್ ಭಟ್ ಗೆ ಜೀವಾವಧಿ ಶಿಕ್ಷೆ ನೀಡಲಾಗಿದೆ. ಐದನೇ ಆರೋಪಿ ಚಾಲಕ ರಾಘವೇಂದ್ರನನ್ನು ಖುಲಾಸೆಗೊಳಿಸಲಾಗಿದೆ. ನಾಲ್ಕನೇ ಆರೋಪಿ ಶ್ರೀನಿವಾಸ್ ಭಟ್ ಅನಾರೋಗ್ಯದಿಂದ ಮೃತಪಟ್ಟಿದ್ದರು.
ಉಡುಪಿಯ ಇಂದ್ರಾಳಿಯಲ್ಲಿ 2016ರ ಜುಲೈ 28ರಂದು ಉದ್ಯಮಿ ಭಾಸ್ಕರ್ ಶೆಟ್ಟಿಯನ್ನು ಅವರ ಹೆಂಡತಿ, ಮಗ ಹಾಗೂ ಹೆಂಡತಿಯ ಗೆಳೆಯ ಸೇರಿ ಕೊಲೆ ಮಾಡಿ, ಹೋಮದ ಕುಂಡದಲ್ಲೇ ಸುಟ್ಟುಹಾಕಿದ್ದರು.