ಉತ್ತರ ಕರ್ನಾಟಕದ ಕಲಬುರಗಿ, ಬೆಳಗಾವಿ ಮತ್ತು ಹುಬ್ಬಳ್ಳಿ-ಧಾರವಾಡ ಮೂರು ಮಹಾನಗರ ಪಾಲಿಕೆಗಳ ಚುನಾವಣೆ ದಿನಾಂಕವನ್ನು ರಾಜ್ಯ ಚುನಾವಣಾ ಆಯೋಗ ಘೋಷಿಸಿದೆ.
ಬುಧವಾರ ಚುನಾವಣಾ ಆಯೋಗ ಹೊರಡಿಸಿದ ಆದೇಶದ ಪ್ರಕಾರ ಆಗಸ್ಟ್ 18ರಂದು ಅಧಿಸೂಚನೆ ಪ್ರಕಟವಾಗಲಿದೆ. ಆಗಸ್ಟ್ 23ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.
ಸೆಪ್ಟೆಂಬರ್ 9ರಂದು ಮತದಾನ ನಡೆಯಲಿದ್ದು, ಸೆಪ್ಟೆಂಬರ್ 9ರಂದು ಅಗತ್ಯಬಿದ್ದರೆ ಮರು ಮತದಾನಕ್ಕೆ ಅವಕಾಶ ನೀಡಲಾಗಿದೆ. ಸೆಪ್ಟೆಂಬರ್ 9ರಂದು ಮತ ಎಣಿಕೆ ನಡೆಯಲಿದೆ.