ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 3082 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, 12 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾನುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 9,51,452ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 12,504ಕ್ಕೆ ತಲುಪಿದೆ.
ರಾಜ್ಯದಲ್ಲಿ ಒಂದು ದಿನಲ್ಲಿ 1285 ಸೋಂಕಿತರು ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 9.51,452ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 23,037ಕ್ಕೆ ಜಿಗಿತ ಕಂಡಿದೆ.
ಬೆಂಗಳೂರಿನಲ್ಲಿ ಒಂದೇ ದಿನ 2004 ಸೋಂಕು ಪ್ರಕರಣಗಳು ವರದಿಯಾಗಿದ್ದು, 786 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದಾರೆ. 7 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ 15882 ಸಕ್ರಿಯ ಪ್ರಕರಣಗಳು ನಗರದಲ್ಲಿ ಹೆಚ್ಚಾಗಿವೆ.