ಬೆಂಗಳೂರು : ದಿನದಿಂದ ದಿನಕ್ಕೆ ಕೊರೊನಾ ಕೇಸ್ಗಳು ಇಳಿಕೆ ಕಾಣುತ್ತಿದ್ದು, ರಾಜ್ಯದಲ್ಲಿ ಇಂದು 30309 ಹೊಸದಾಗಿ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. 525 ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಇಂದು 30309 ಹೊಸದಾಗಿ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. 525 ಸೋಂಕಿತರು ಸಾವನ್ನಪ್ಪಿದ್ದಾರೆ. ಸೋಂಕಿತರ ಸಂಖ್ಯೆ 22,72,374 ಕ್ಕೆ ಏರಿಕೆಯಾಗಿದೆ.
ಇಂದು ಗುಣಮುಖರಾಗಿ 58,395 ಮಂದಿ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 16,74,487 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 5,75,028 ಕ್ಕೆ ಇಳಿಕೆಯಾಗಿದೆ. ರಾಜ್ಯದಾದ್ಯಂತ ಇಲ್ಲಿಯವರೆಗೆ 22,838 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.