ದೇಶದಲ್ಲಿ ಕಳೆದ 24 ಗಂಟೆಯಲ್ಲಿ 30,549 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 422 ಮಂದಿ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಹೊರಡಿಸಿದ ಅಂಕಿ ಅಂಶದ ಪ್ರಕಾರ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,17,26,507ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 4,25,195ಕ್ಕೆ ಜಿಗಿತ ಕಂಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 4,04,958ಕ್ಕೆ ತಲುಪಿದೆ.
ಕಳೆ ಒಂದು ದಿನದಲ್ಲಿ 38,887 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಚೇತರಿಸಿಕೊಂಡವರ ಸಂಖ್ಯೆ 3,08,96,354ಕ್ಕೆ ತಲುಪಿದೆ. ಒಂದೇ ದಿನದಲ್ಲಿ 16,49,295 ಮಂದಿಗೆ ಕೊರೊನಾ ಪರೀಕ್ಷೆಗೊಳಪಡಿಸಲಾಗಿದೆ. ಒಟ್ಟಾರೆ 47,85,44,114 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.