ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 12,209 ಹೊಸ ಪ್ರಕರಣಗಳು ದೃಢಪಟ್ಟಿದ್ದು, 320 ಮಂದಿ ಮೃತಪಟ್ಟಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾನುವಾರ ಬಿಡುಗಡೆ ಮಾಡಿದ ಬುಲೆಟಿನ್ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 26,95,523ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 31,580ಕ್ಕೆ ಜಿಗಿತ ಕಂಡಿದೆ.
ಒಂದು ದಿನದಲ್ಲಿ 25,659 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 24,09,417ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2,54,505ಕ್ಕೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 2944 ಮಂದಿಗೆ ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 187 ಮಂದಿ ಮೃತಪಟ್ಟಿದ್ದಾರೆ. 10,224 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.