ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 3203 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 93 ಮಂದಿ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಪ್ರಕಟಿಸಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಂದು ದಿನದಲ್ಲಿ 14302 ಮಂದಿ ಗುಣಮುಖಿತರಾಗಿದ್ದಾರೆ.
ಬೆಂಗಳೂರಿನಲ್ಲಿ ಕೂಡ ಕೊರೊನಾ ಅಬ್ಬರ ತಗ್ಗಿದ್ದು, 676 ಪಾಸಿಟಿವ್ ಪ್ರಕರಣಗಳು ದೃಢಪಟ್ಟರೆ, 18 ಮಂದಿ ಅಸುನೀಗಿದ್ದಾರೆ.