ರಾಜ್ಯದಲ್ಲಿ ಕೊರೋನಾ ಮೂರನೇ ಅಲೆಯ ಅಬ್ಬರ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 382 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,41,835ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು 10 ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 39979ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 239 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,79,017ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ ಕೊರೋನಾದಿಂದ ನಾಲ್ವರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ರಾಜ್ಯದಲ್ಲಿ ಇಂದು 689 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 38,97,928ಕ್ಕೆ ಏರಿಕೆಯಾಗಿದೆ. ಇನ್ನು 3890 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ದೈನಂದಿನ ಕೋವಿಡ್ ಪಾಸಿಟಿವಿಟಿ ದರ ಶೇ. 1.04ಕ್ಕೆ ಇಳಿದಿದ್ದು, ಸಾವಿನ ಪ್ರಮಾಣ ಶೇ. 2.61ರಷ್ಟಿದೆ.