ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,82,315 ಮಂದಿಗೆ ಹೊಸದಾಗಿ ಕೊರೊನಾ ಪ್ರಕರಣಗಳು ದೃಢಪಟ್ಟಿವೆ. 3,780 ಸೋಂಕಿತರು ಸಾವನ್ನಪ್ಪಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 382,315 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 20,665,148,ಕ್ಕೆ ಏರಿಕೆಯಾಗಿದೆ.
3,780 ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ವೈರಸ್ ಸೋಂಕಿಗೆ ಮೃತಪಟ್ಟವರ ಸಂಖ್ಯೆ 2,26,188 ಕ್ಕೆ ಏರಿಕೆಯಾಗಿದೆ.
338,439 ಕೊರೊನಾ ಸೋಂಕಿತರು ಗುಣಮುಖರಾಗಿದ್ದು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ದೇಶದಲ್ಲಿ 3,487,229 ಕೊರೊನಾ ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.