ರಾಜ್ಯದಲ್ಲಿ ಒಂದು ದಿನದಲ್ಲಿ 38,603 ಹೊಸದಾಗಿ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, 476 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಲಾಕ್ ಡೌನ್ ನಡುವೆಯೂ ಸೋಂಕು ಹಾಗೂ ಸಾವಿನ ಪ್ರಮಾಣದಲ್ಲಿ ಏರಿಕೆಯಾಗುತ್ತಲೇ ಇರುವುದು ಆತಂಕ ಹೆಚ್ಚಿಸಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಪ್ರಕಟಿಸಿದ ಬುಲೆಟಿನ್ ಪ್ರಕಾರ ರಾಜಧಾನಿ ಬೆಂಗಳೂರಿನಲ್ಲಿ 13,338 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, 239 ಮಂದಿ ಬಲಿಯಾಗಿದ್ದಾರೆ.