ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಒಂದೇ ದಿನ 3,92,488 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 1,95,57,457ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಕೋವಿಡ್ ಸೋಂಕಿಗೆ 3,689 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಇದುವರೆಗೆ ದೇಶದಲ್ಲಿ ಕೋವಿಡ್ ನಿಂದ ಸಾವನ್ನಪ್ಪಿದವರ ಸಂಖ್ಯೆ 2,15,542ಕ್ಕೆ ಏರಿಕೆಯಾಗಿದೆ.
3,07,865 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ 33,49,644 ಸಕ್ರಿಯ ಪ್ರಕರಣಗಳಿದ್ದು, ದೇಶದಲ್ಲಿ ಒಟ್ಟು 15,68,16,031 ಮಂದಿ ಕೋವಿಡ್ ವ್ಯಾಕ್ಸಿನ್ ಪಡೆದುಕೊಂಡಿದ್ದಾರೆ.