ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 39,305 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಒಂದೇ ದಿನ 596 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿಂದು 32,188 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 13,83,285 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5,71,006 ಏರಿಕೆಯಾಗಿದೆ. ಇದುವರೆಗೆ ರಾಜ್ಯದಲ್ಲಿ 19,372 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು ಪ್ರಕರಣಗಳ ಸಂಖ್ಯೆ 19,73,683 ಕ್ಕೆ ಏರಿಕೆಯಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು 16,747 ಜನರಿಗೆ ಸೋಂಕು ತಗಲಿದೆ. ಇವತ್ತು ಒಂದೇ ದಿನ 374 ಮತ್ತು ಸೋಂಕಿತರು ಮೃತಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,52,454 ಕ್ಕೆ ಏರಿಕೆಯಾಗಿದೆ.