ಬೆಂಗಳೂರು: ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 39,510 ಪಾಸಿಟಿವ್ ಕೇಸ್ಗಳು ಪತ್ತೆಯಾಗಿವೆ. 480 ಸೋಂಕಿತರು ಸಾವನ್ನಪ್ಪಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, 24 ಗಂಟೆಯಲ್ಲಿ ರಾಜ್ಯದಲ್ಲಿ ಆಸ್ಪತ್ರೆಯಿಂದ 22,584 ಜನರು ಗುಣಮುಖಗೊಂಡು ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಒಟ್ಟು ಪ್ರಕರಣಗಳ ಸಂಖ್ಯೆ 20,13,193ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 5,87,452ಕ್ಕೆ ತಲುಪಿದೆ. ಇದುವರೆಗೂ ಒಟ್ಟು ಗುಣಮುಖಗೊಂಡರು 1405869, ಒಟ್ಟು ಮೃತಪಟ್ಟವರ ಸಂಖ್ಯೆ 19852.
ಇನ್ನೂ ಬೆಂಗಳೂರು ಒಂದರಲ್ಲೇ 15,879 ಹೊಸ ಕೊರೊನಾ ಕೇಸ್ಗಳು ಪತ್ತೆಯಾಗಿದ್ದು, 259 ಸೋಂಕಿತರು ಸಾವನ್ನಪ್ಪಿದ್ದಾರೆ, 4.2 ಲಕ್ಷ ಸಕ್ರೀಯ ಸೋಂಕಿತರು ಬೆಂಗಳೂರಲ್ಲೆ ಇದ್ದಾರೆ.