ರಾಜ್ಯದಲ್ಲಿ 39,510 ಪಾಸಿಟಿವ್: ಸಚಿವ ಕೆ.ಸುಧಾಕರ್

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 39,510 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಲಾಕ್ ಡೌನ್ ವಿಧಿಸಿದ ನಂತರ ರಾಜ್ಯದಲ್ಲಿ ಕೊರೊನಾ ಸ್ಥಿರವಾಗಿದ್ದು ಒಂದು ದಿನದಲ್ಲಿ 39510 ಪ್ರಕರಣಗಳು ವರದಿಯಾಗಿದ್ದು, ಸರಿಸುಮಾರು ನಿನ್ನೆಯಷ್ಟೇ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಎಂದರು. ದೃಢ

ರಾಜಧಾನಿ ಬೆಂಗಳೂರಿನಲ್ಲಿ ಕಳೆದ 2 ವಾರದಿಂದ 20 ಸಾವಿರಕ್ಕೂ ಅಧಿಕ ಸೋಂಕು ಪ್ರಕರಣಗಳು ವರದಿಯಾಗುತ್ತಿದ್ದು, ಮಂಗಳವಾರ ಒಂದು ದಿನದಲ್ಲಿ 15,879 ಸೋಂಕು ಪ್ರಕರಣಗಳು ವರದಿಯಾಗಿದೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 480 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಬೆಂಗಳೂರಿನಲ್ಲಿ 259 ಮಂದಿ ಸಾವಿಗೀಡಾಗಿದ್ದಾರೆ ಎಂದು ಅವರು ಅಂಕಿ-ಅಂಶ ನೀಡಿದರು,

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!