ಬೆಂಗಳೂರು : ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 39998 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, 517 ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2053191 ಕ್ಕೇರಿಕೆಯಾದರೆ, ಒಟ್ಟು ಸಾವಿನ ಸಂಖ್ಯೆ 20 ಸಾವಿರದ ಗಡಿ ದಾಟಿದೆ. ಇಂದು ರಾಜ್ಯಾದ್ಯಂತ 34752 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೆ ಒಟ್ಟು 1440621 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ.
ಬೆಂಗಳೂರಿನಲ್ಲಿ 16286 ಜನರಿಗೆ ಕೊರೊನಾ ತಗುಲಿದ್ದು, 275 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಈವರೆಗೆ 999805 ಮಂದಿಗೆ ಕೊರೋನಾ ತಗುಲಿದೆ. ಒಟ್ಟು 8964 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.