ನಾಯಕ ಶಿಖರ್ ಧವನ್ ಶ್ರೀಲಂಕಾ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಲು ನಿರ್ಧರಿಸಿದ್ದಾರೆ.
ಮೂರು ಪಂದ್ಯಗಳ ಟಿ-20 ಸರಣಿ 1-1ರಿಂದ ಸಮಬಲಗೊಂಡಿದ್ದು, ಈ ಪಂದ್ಯದಲ್ಲಿ ಗೆದ್ದ ತಂಡ ಸರಣಿಯನ್ನು ವಶಪಡಿಸಿಕೊಳ್ಳಲಿದೆ.
ಕೃನಾಲ್ ಪಾಂಡ್ಯ ಕೊರೊನಾ ಪಾಸಿಟಿವ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹಲವು ಪ್ರಮುಖ ಆಟಗಾರರ ಅನುಪಸ್ಥಿತಿಯಲ್ಲಿ ಯುವ ಆಟಗಾರರನ್ನು ಕಣಕ್ಕಿಳಿಸಲಾಗಿದ್ದು, ಈ ಪಂದ್ಯದ ಮೂಲಕ ಮಧ್ಯಮ ವೇಗಿ ಸಂದೀಪ್ ವಾರಿಯರ್ಸ್ ಅಂತಾರಾಷ್ಟ್ರೀಯ ಟಿ-20 ಕ್ರಿಕೆಟ್ ಗೆ ಪಾದರ್ಪಣೆ ಮಾಡಿದ್ದಾರೆ.