ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 4 ಡೆಲ್ಟಾ ಸೋಂಕು ಪ್ರಕರಣಗಳು ವರದಿಯಾಗಿವೆ ಎಂದು ಮೈಸೂರು ಆರೋಗ್ಯ ಇಲಾಖೆ ದೃಢಪಡಿಸಿದೆ.
ಮೈಸೂರಿನಲ್ಲಿ ಕೊರೊನಾ ರೂಪಾಂತರ 4 ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, 3 ಡೆಲ್ಟಾ ಸ್ಟ್ರೇನ್ ಮತ್ತು 1 ಒಂದು ಡೆಲ್ಟಾ ಪ್ಲಸ್ ಎಂಬುದು ದೃಢಪಟ್ಟಿದೆ. ಮೇ ತಿಂಗಳಿನಲ್ಲಿ ಎಲ್ಲಾ ಮಾದರಿ ಸಂಗ್ರಹ ಮಾಡಲಾಗಿದ್ದು, ಸದ್ಯ ಎಲ್ಲಾ ಸೋಂಕಿತರು ಗುಣಮುಖರಾಗಿದ್ದಾರೆ.
ಯಾರಲ್ಲೂ ಗಂಭೀರ ಸ್ವರೂಪದ ರೋಗಲಕ್ಷಣಗಳು ಕಂಡು ಬಂದಿಲ್ಲ. ಸೋಂಕಿತರು ಹೋಂ ಐಸೋಲೇಷನ್ ನಲ್ಲಿ ವೈದ್ಯಕೀಯ ಶಿಷ್ಟಾಚಾರ ಪಾಲಿಸಿದ್ದಾರೆ. ಈ ವಿಚಾರವಾಗಿ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ. ಆದ್ದರಿಂದ ಸಾರ್ವಜನಿಕರು ಆತಂಕಪಡುವ ಅಗತ್ಯವಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪ್ರಸಾದ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.