ಕಳ್ಳತನ ಮಾಡುತ್ತಿದ್ದ ನೇಪಾಳ ಮೂಲದ ನಾಲ್ವರು ಸೆಕ್ಯೂರೆಟಿ ಗಾರ್ಡ್ ಗಳನ್ನು ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ನೇಪಾಳ ಮೂಲದ ಮನೋಜ್, ಕೇಶವ್ ರಾಜ್, ಪ್ರಕಾಶ್ ಬಹದ್ದೂರ್ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದು, 75 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಇದರಲ್ಲಿ 221 ಗ್ರಾಂ ತೂಕದ ಚಿನ್ನಾಭರಣ, 13 ಗ್ರಾಂ ವಜ್ರದ ಕಲ್ಲಿನ ಆಭರಣ, 500 ಗ್ರಾಂ ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸೆಕ್ಯೂರೆಟಿ ಗಾರ್ಡ್ ಗಳಲ್ಲಿ ಕೆಲಸ ಮಾಡಿಕೊಂಡು ಖಾಲಿ ಇರುವ ಮನೆಗಳನ್ನು ಗುರುತಿಸಿ ಕಳವು ಮಾಡುತ್ತಿದ್ದರು. ಬೆಂಗಳೂರಿನ ಯಲಹಂಕ ವ್ಯಾಪ್ತಿಯಲ್ಲಿ ವಾಸವಾಗಿದ್ದ ಇವರನ್ನು ಬಲೆ ಬೀಸಿ ಡಿಜೆ ಹಳ್ಳಿ ಪೊಲೀಸರು ಬಂಧಿಸಿದ್ದಾರೆ.